Home ಕರಾವಳಿಪುತ್ತೂರು ಬಿಜೆಪಿ ಮುಖಂಡನ ಪುತ್ರನ ಲವ್ ಸೆಕ್ಸ್ ದೋಖಾ ಪ್ರಕರಣ: ಅನುಮತಿಯಿಲ್ಲದೇ ಪ್ರತಿಭಟಿಸಿದ್ದ ಎಸ್ಡಿಪಿಐ ವಿರುದ್ದ ಎಫ್ಐಆರ್!

ಪುತ್ತೂರು ಬಿಜೆಪಿ ಮುಖಂಡನ ಪುತ್ರನ ಲವ್ ಸೆಕ್ಸ್ ದೋಖಾ ಪ್ರಕರಣ: ಅನುಮತಿಯಿಲ್ಲದೇ ಪ್ರತಿಭಟಿಸಿದ್ದ ಎಸ್ಡಿಪಿಐ ವಿರುದ್ದ ಎಫ್ಐಆರ್!

by diksoochikannada.com

ಪುತ್ತೂರು: ಪುತ್ತೂರು ಬಿಜೆಪಿ ಮುಖಂಡನ ಪುತ್ರನ ವಿರುದ್ಧದ ಲವ್ ಸೆಕ್ಸ್ ದೋಖಾ ಪ್ರಕರಣದ ಹಿನ್ನೆಲೆಯಲ್ಲಿ ಯಾವುದೇ ಅನುಮತಿ ಪಡೆಯದೇ ಎಸ್ಡಿಪಿಐ (SDPI) ನಡೆಸಿದ ಪ್ರತಿಭಟನೆಯ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ನಿನ್ನೆ ಸಂಜೆ ಪುತ್ತೂರು ಕಸಬಾ ಗ್ರಾಮದ ಕಿಲ್ಲೆ ಮೈದಾನ ಬಳಿ ಎಸ್ಡಿಪಿಐ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಯಾವುದೇ ಪೂರ್ವಾನುಮತಿ ಇಲ್ಲದೆ, ಅಕ್ರಮವಾಗಿ ಗುಂಪು ಸೇರುವ ಮೂಲಕ ಧ್ವನಿವರ್ಧಕ ಉಪಯೋಗಿಸಿ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ.

ಪುತ್ತೂರು ಎಸ್ಡಿಪಿಐ ಅಧ್ಯಕ್ಷ ಅಶ್ರಫ್ ಬಾವು ಸೇರಿ ಎಸ್ಡಿಪಿಐ ಗ್ರಾಮಾಂತರ ಜಿಲ್ಲಾ ಉಪಾಧ್ಯಕ್ಷ ಮೊನೀಶ್ ಅಲಿ, ಜಿಲ್ಲಾ ನಾಯಕಿ ಝೀನತ್ ಸೇರಿದಂತೆ ಸುಮಾರು 30ಕ್ಕೂ ಹೆಚ್ಚು ಮಂದಿ ಪ್ರತಿಭಟನೆ ನಡೆಸಿದ್ದರು. ಪೊಲೀಸರು ಭಾರತೀಯ ದಂಡ ಸಂಹಿತೆ ಅನ್ವಯ BNS ಕಲಂ 189(ಸಿ) ಹಾಗೂ ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 109 ಅಡಿಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ್ದಾರೆ. ಎಸ್ಡಿಪಿಐ ಪ್ರತಿಭಟನೆಯಲ್ಲಿ ಸಂತ್ರಸ್ತ ಯುವತಿಯ ತಾಯಿ ಕೂಡ ಭಾಗವಹಿಸಿದ್ದರು. ತಮ್ಮ ಪುತ್ರಿಗೆ ನ್ಯಾಯ ದೊರಕಿಸಬೇಕು ಎಂದು ಆಗ್ರಹಿಸಿ, ಪುತ್ತೂರು ನಗರಸಭೆ ಎದುರು ಪ್ರತಿಭಟನೆ ನಡೆಸಲಾಗಿತ್ತು.
ಪುತ್ತೂರು ನಗರ ಮಂಡಲದ ಮಾಜಿ ಬಿಜೆಪಿ ಅಧ್ಯಕ್ಷ ಹಾಗೂ ಹಾಲಿ ನಗರಸಭೆ ಸದಸ್ಯ ಪಿ.ಜಿ. ಜಗನ್ನಿವಾಸ ರಾವ್ ಅವರ ಪುತ್ರ ಕೃಷ್ಣ ಜೆ. ರಾವ್ ಎಂಬವರ ವಿರುದ್ಧ ಪುತ್ತೂರು ಮಹಿಳಾ ಠಾಣೆಯಲ್ಲಿ ಲವ್ ಸೆಕ್ಸ್ ದೋಖಾ ಸಂಬಂಧಿ ಪ್ರಕರಣ ದಾಖಲಾಗಿದೆ. ಸ್ಥಳೀಯ ನಾಗರಿಕರು ಹಾಗೂ ಎಸ್ಡಿಪಿಐ ಮುಖಂಡರು ಆರೋಪಿತನ ಬಂಧನದಲ್ಲಿ ವಿಳಂಬವಾಗುತ್ತಿದೆ ಎಂದು ಪೊಲೀಸರ ಮೇಲೆ ಆರೋಪಿಸಿದ್ದಾರೆ.

You may also like

Leave a Comment