ಮಂಗಳೂರು: ಲಂಚ ಸ್ವೀಕರಿಸುತ್ತಿದ್ದ ವೇಳೆ ಮಂಗಳೂರಿನ ಕದ್ರಿ ಟ್ರಾಫಿಕ್ ಪೊಲೀಸ್ ಠಾಣೆಯ ಎಎಸ್‌ಐ (ಸಹಾಯಕ ಉಪನಿರೀಕ್ಷಕ) ತಸ್ಲಿಂ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದ ಘಟನೆ ನಡೆದಿದೆ.

ದೂರುದಾರರ ಕಾರು ಹಾಗೂ ಸ್ಕೂಟರ್ ನಂತೂರು ಸರ್ಕಲ್ ಬಳಿ ಅಪಘಾತಕ್ಕೀಡಾಗಿದ್ದು, ಈ ಸಂಬಂಧ ಕದ್ರಿ ಟ್ರಾಫಿಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಠಾಣೆಯ ಸಿಬ್ಬಂದಿ ತಸ್ಲಿಂ, ಕಾರು ಹಾಗೂ ದಾಖಲೆಗಳನ್ನು ತಂದುಕೊಡಲು ಸೂಚನೆ ನೀಡಿದ ಹಿನ್ನೆಲೆಯಲ್ಲಿ ಕಾರಿನ ಮಾಲೀಕ ಎಲ್ಲಾ ದಾಖಲೆಗಳೊಂದಿಗೆ ಹಾಜರಾಗಿದ್ದರು. ಆದರೆ ತಸ್ಲಿಂ, ಕಾರು ಬಿಡುಗಡೆಗೆ 50,000 ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ. ಇದಾದ ಬಳಿಕ ತಮ್ಮ ವಕೀಲರೊಂದಿಗೆ ಬಂದು ಕಾರು ಬಿಡುಗಡೆಗೆ ಕೋರಿದಾಗ ಮೊಬೈಲ್ ವಶಪಡಿಸಿಕೊಂಡು ಕಾರನ್ನು ಬಿಟ್ಟು ಕಳುಹಿಸಿದ್ದಾರೆ.

ಮೊಬೈಲ್ ಗಾಗಿ ಪುನಃ ಸಂಪರ್ಕಿಸಿದಾಗ ತಸ್ಲಿಂ 50,000/- ಲಂಚದ ಹಣಕ್ಕೆ ಬೇಡಿಕೆ ಇಟ್ಟು ಮೊಬೈಲ್ ಪೋನ್ ಅನ್ನು ಹಿಂತಿರುಗಿಸಬೇಕಾದರೆ ಓರಿಜಿನಲ್ ಲೈಸನ್ಸ್ ಅನ್ನು ಠಾಣೆಗೆ ತಂದುಕೊಡುವಂತೆ ತಿಳಿಸಿರುತ್ತಾರೆ. ಹಾಗಾಗಿ ಓರಿಜಿನಲ್ ಲೈಸನ್ಸ್ ಅನ್ನು ನೀಡಿರುತ್ತಾರೆ. ಹಾಗಾಗಿ ತಸ್ಲಿಂ ಠಾಣೆಯ ಮತ್ತೋರ್ವ ಸಿಬ್ಬಂದಿ ವಿನೋದ್ ಮುಖಾಂತರ 30,000/- ಲಂಚದ ಹಣ ಕೊಟ್ಟು ಓರಿಜಿನಲ್ ಲೈಸನ್ಸ್ ಪಡೆದುಕೊಂಡು ಹೋಗಲು ತಿಳಿಸಿದ್ದು, ದೂರುದಾರರು ಜುಲೈ 9 2025 ರಂದು ಕದ್ರಿ ಟ್ರಾಪಿಕ್ ಪೊಲೀಸ್ ಠಾಣೆಗೆ ಹೋಗಿ ತಸ್ಲಿಂ ಭೇಟಿ ಮಾಡಿ ಮಾಡಿದಾಗ ಓರಿಜಿನಲ್ ಲೈಸನ್ಸ್ ನೀಡಲು ತಸ್ಲಿಂ ಮತ್ತೆ 10,000/- ಹಣವನ್ನು ನೀಡುವಂತೆ ತಿಳಿಸಿರುತ್ತಾರೆ. ಆಗ ತನ್ನಲ್ಲಿ ರೂ 500 ಇದೆ ಎಂದಾಗ 5000 ಇಲ್ಲದೇ ಠಾಣೆ ಕಡೆಗೆ ಬರಬೇಡ ಎಂದು ಬೈದು ಕಳುಹಿಸಿದ್ದಾಗಿ ದೂರಲಾಗಿದೆ. ಕಡಿಮೆ ಮಾಡಿ ಎಂದಾಗ ಓರಿಜಿನಲ್ ಲೈಸನ್ಸ್ ನೀಡಲು 5000/- ಲಂಚದ ಹಣಕ್ಕೆ ಬೇಡಿಕೆ ಇಟ್ಟಿರುತ್ತಾರೆ. ಹೀಗಾಗಿ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಈ ಬಗ್ಗೆ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಕದ್ರಿ ಟ್ರಾಪಿಕ್ ಪೊಲೀಸ್ ಠಾಣೆಯ ಸಿಬ್ಬಂದಿ ತಸ್ಲಿಂ ಮತ್ತು ವಿನೋದ್ ವಿರುದ್ಧ ಪ್ರಕರಣ ದಾಖಲಾಗಿರುತ್ತದೆ.
ಇಂದು ಕದ್ರಿ ಟ್ರಾಫಿಕ್ ಪೊಲೀಸ್ ಠಾಣೆಯ ಸಿಬ್ಬಂದಿ ತಸ್ಲಿಂ 5000/- ಲಂಚದ ಹಣವನ್ನು ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದು, ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ.