ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಯು.ಪಿ.ಓ.ಆರ್ ನಲ್ಲಿ ಹೊರಗುತ್ತಿಗೆ ನೌಕರರಾಗಿರುವ ವ್ಯಕ್ತಿಯ ಸಂಬಳ ಬಿಲ್ ಮತ್ತು ಮುಂದಿನ ನೇಮಕಾತಿ ಆದೇಶಕ್ಕಾಗಿ ಲಂಚ ಬೇಡಿಕೆ ಇಟ್ಟಿದ್ದ ಮೂವರು ಭೂದಾಖಲೆ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಯನ್ನ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ಒಟ್ಟು ರೂ. 70,000 ಲಂಚ ಪಡೆಯುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ. ಬಾಕಿ ಸಂಬಳದ ಬಿಲ್ ಮಾಡಿಕೊಡಲು ಮತ್ತು ಹೊರಗುತ್ತಿಗೆ ವ್ಯವಸ್ಥೆಯಲ್ಲಿ ಮುಂದುವರಿಯುವಂತೆ ಆದೇಶ ನೀಡಲು ಉಳ್ಳಾಲದ ಭೂದಾಖಲೆಗಳ ಸಹಾಯಕ ನಿರ್ದೇಶಕರ ಕಛೇರಿಯ ಸರ್ವೆಯರ್ ಕೃಷ್ಣಮೂರ್ತಿ, 50,000 ಹಾಗೂ ಬಿ.ಕೆ. ರಾಜು, ಭೂದಾಖಲೆಗಳ ಸಹಾಯಕ ನಿರ್ದೇಶಕರು, ಮಂಗಳೂರು ತಾಲೂಕು ಇವರು 10,000, ಎಸ್. ಧನಶೇಖರ, ಸರ್ವೆ ಸುಪರ್‌ವೈಸರ್ – ರೂ. 10,000 ರೂಗೆ ಲಂಚ ಬೇಡಿಕೆ ಇಟ್ಟಿರುವ ಬಗ್ಗೆ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇಂದು ಪಿರ್ಯಾದಿದಾರರಿಂದ ಲಂಚದ ಹಣ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರು ಮೂವರು ಅಧಿಕಾರಿಗಳನ್ನು ವಶಕ್ಕೆ ಪಡೆದಿದ್ದಾರೆ. ಕೃಷ್ಣಮೂರ್ತಿ – ರೂ. 20,000, ಬಿ.ಕೆ. ರಾಜು – ರೂ. 5,000, ಎಸ್. ಧನಶೇಖರ – ರೂ. 5,000 ಸ್ವೀಕರಿಸುವಾಗ ಬಲೆಗೆ ಬಿದ್ದಿದ್ದಾರೆ. ಈ ಟ್ರ್ಯಾಪ್ ಕಾರ್ಯಾಚರಣೆಯನ್ನು ಕುಮಾರಚಂದ್ರ, ಪೊಲೀಸ್ ಅಧೀಕ್ಷಕರು (ಪ್ರಭಾರ), ಲೋಕಾಯುಕ್ತ ಮಂಗಳೂರು ವಿಭಾಗರವರ ಮಾರ್ಗದರ್ಶನದಲ್ಲಿ, ಡಾ. ಗಾನ ಪಿ. ಕುಮಾರ್ – ಉಪಾಧೀಕ್ಷಕ, ಸುರೇಶ್ ಕುಮಾರ್.ಪಿ – ಪಿ.ಎಸ್.ಐ, ಭಾರತಿ ಜಿ., ಚಂದ್ರಶೇಖರ್ ಕೆ.ಎನ್., ರವಿ ಪವಾರ್, ರಾಜೇಂದ್ರ ನಾಯಕ್ ಎಂ.ಎನ್.
ರವರ ತಂಡ ನಡೆಸಿದೆ.
