Home ಕರಾವಳಿಮಂಗಳೂರು ಪೊಲೀಸರಿಂದ ಅರ್ಧ ಕೋಟಿ ಮೌಲ್ಯದ ಭಾರೀ ಡ್ರಗ್ ಭೇಟೆ: ವಿದ್ಯಾರ್ಥಿಗಳೇ ಟಾರ್ಗೆಟ್!

ಮಂಗಳೂರು ಪೊಲೀಸರಿಂದ ಅರ್ಧ ಕೋಟಿ ಮೌಲ್ಯದ ಭಾರೀ ಡ್ರಗ್ ಭೇಟೆ: ವಿದ್ಯಾರ್ಥಿಗಳೇ ಟಾರ್ಗೆಟ್!

by diksoochikannada.com

ಮಂಗಳೂರು: ನಗರದಲ್ಲಿ ಸಾರ್ವಜನಿಕ ಸ್ಥಳಗಳು ಹಾಗೂ ಶಾಲಾ–ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತು ಪೂರೈಕೆ ಮಾಡಲು ನಡೆದ ಯತ್ನವನ್ನು ಮಂಗಳೂರು ಸಿಸಿಬಿ ಪೊಲೀಸರು ಭಾರೀ ದಾಳಿಯಿಂದ ಭಗ್ನಗೊಳಿಸಿದ್ದಾರೆ. ಸುಮಾರು 50 ಲಕ್ಷ ರೂಪಾಯಿ ಮೌಲ್ಯದ 517.76 ಗ್ರಾಂ ಎಂಡಿಎಂಎ ವಶಕ್ಕೆ ಪಡೆಯಲಾಗಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.

ಮಂಗಳೂರು ಸಿಸಿಬಿ ಘಟಕದ ಎ.ಸಿ.ಪಿ. ಮನೋಜ್ ಕುಮಾರ್ ನಾಯ್ಕ್ ಅವರ ನೇತೃತ್ವದಲ್ಲಿ ವಿಶೇಷ ಬಲೆಗೆ ಕಾರ್ಯಾಚರಣೆ ನಡೆದಿದೆ. ಮಂಗಳೂರು–ಉಡುಪಿ ರಾಷ್ಟ್ರೀಯ ಹೆದ್ದಾರಿ ಬಳಿಯ ಕಾರಿನಲ್ಲಿ ಮಾದಕ ವಸ್ತು ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಕುಂದಾಪುರದ ಮೊಹಮ್ಮದ್ ಶಿಯಾಬ್ @ ಶಿಯಾಬ್, ಉಳ್ಳಾಲದ ಮೊಹಮ್ಮದ್ ನೌಷದ್, ಕಸಬಾ ಬೆಂಗ್ರೆಯ ಇಮ್ರಾನ್, ಬಂಟ್ವಾಳದ ನಿಸಾರ್ ಅಹಮ್ಮದ್ ಬಂಧಿತರು. ಆರೋಪಿಗಳು ಬೆಂಗಳೂರಿನಲ್ಲಿ ಒಬ್ಬ ನೈಜೀರಿಯಾದ ವ್ಯಕ್ತಿಯಿಂದ ಡ್ರಗ್‌ಗಳನ್ನು ಪಡೆದು, ಮಂಗಳೂರಿನಲ್ಲಿ ಮಾರಾಟ ಮಾಡಲು ಯತ್ನಿಸುತ್ತಿದ್ದರೆಂಬುದು ತನಿಖೆಯಿಂದ ಸ್ಪಷ್ಟವಾಗಿದೆ. 517.76 ಗ್ರಾಂ ಎಂಡಿಎಂಎ (ಮೌಲ್ಯ: ಸುಮಾರು ₹50 ಲಕ್ಷ), 10 ಲಕ್ಷ ಮೌಲ್ಯದ ನೀಲಿ ಬಣ್ಣದ ಮಾರುತಿ FRONX ಕಾರು, 5 ಮೊಬೈಲ್ ಫೋನ್‌ಗಳು ವಶಕ್ಕೆ ಪಡೆಯಲಾಗಿದೆ. ‌ಸಾರ್ವಜನಿಕ ಸ್ಥಳಗಳಿಗೆ ಬಂದ ಜನರು, ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳನ್ನು ಪ್ರತ್ಯೇಕವಾಗಿ ಟಾರ್ಗೆಟ್ ಮಾಡಲಾಗುತ್ತಿತ್ತು. ಆರೋಪಿಗಳ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯ ಜೊತೆಗೆ 3(5) BNS ಸೆಕ್ಷನ್ ಅನ್ವಯ ಪ್ರಕರಣ ದಾಖಲಾಗಿದೆ.

You may also like

Leave a Reply