Home ಕರಾವಳಿಪೋಕ್ಸೊ ಕೇಸ್ ನಲ್ಲಿ ಮಂಗಳೂರು ಚರ್ಚ್ ಧರ್ಮಗುರು ಬಂಧನ: ಪ್ರಾರ್ಥನೆಗೆ ಬರ್ತಿದ್ದ ಮಗುವಿಗೆ ಲೈಂಗಿಕ ದೌರ್ಜನ್ಯ ಕೇಸ್!

ಪೋಕ್ಸೊ ಕೇಸ್ ನಲ್ಲಿ ಮಂಗಳೂರು ಚರ್ಚ್ ಧರ್ಮಗುರು ಬಂಧನ: ಪ್ರಾರ್ಥನೆಗೆ ಬರ್ತಿದ್ದ ಮಗುವಿಗೆ ಲೈಂಗಿಕ ದೌರ್ಜನ್ಯ ಕೇಸ್!

by diksoochikannada.com

ಮಂಗಳೂರು: ಮಂಗಳೂರಿನ ಚರ್ಚ್‌ನ ಫಾದರ್ ಸಿಪ್ರಿಯನ್ ಪಿಂಟೋ ವಿರುದ್ಧ ಅಪ್ರಾಪ್ತ ಬಾಲಕರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಸಂಬಂಧ ದಾಖಲಾಗಿದ್ದ ಪೋಕ್ಸೊ ಕೇಸ್ ನಲ್ಲಿ ಪಾಂಡೇಶ್ವರ ಠಾಣೆ ಪೊಲೀಸರು ಆರೋಪಿ ಫಾದರ್ ಸಿಪ್ರಿಯನ್ ಪಿಂಟೋ ಬಂಧಿಸಿದ್ದಾರೆ.‌ ಸಂಬಂಧಿಕರೊಬ್ಬರ ಮನೆಯಿಂದ ಪಾದ್ರಿಯ ವಶಕ್ಕೆ ಪಡೆಯಲಾಗಿದ್ದು, ವಿಚಾರಣೆ ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.

ಪ್ರಾರ್ಥನೆಗಾಗಿ ಚರ್ಚ್‌ಗೆ ಬರುತ್ತಿದ್ದ ಬಾಲಕನಿಗೆ ಚಾಕಲೇಟ್ ನೀಡಿ ಪುಸಲಾಯಿಸಿ, ಚರ್ಚ್‌ನ ಕೊಠಡಿಯೊಂದಕ್ಕೆ ಕರೆದೊಯ್ದು ಲೈಂಗಿಕ ಕಿರುಕುಳ ನೀಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು. ದೂರಿನ ಪ್ರಕಾರ ಆಗಸ್ಟ್ 14ರಂದು ಸಂಜೆ ಸುಮಾರು 6.30ರ ವೇಳೆಗೆ ಪ್ರಾರ್ಥನೆಗಾಗಿ ಚರ್ಚ್‌ಗೆ ತೆರಳಿದ್ದ ಬಾಲಕನನ್ನು ರಿಸೆಪ್ಷನಿಸ್ಟ್ ಕೊಠಡಿಗೆ ಕರೆಸಿಕೊಂಡು ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಲಾಗಿತ್ತು. ಇದಕ್ಕೂ ಮುನ್ನವೂ ಬಾಲಕನನ್ನು ಪುಸಲಾಯಿಸಿ ಅನುಚಿತವಾಗಿ ವರ್ತಿಸಲಾಗಿತ್ತು ಎಂಬ ಆರೋಪ ಕೇಳಿಬಂದಿದೆ. ಘಟನೆಯಿಂದ ಆಘಾತಕ್ಕೊಳಗಾದ ಬಾಲಕ ತನ್ನ ಅನುಭವವನ್ನು ಸ್ನೇಹಿತರೊಂದಿಗೆ ಹಂಚಿಕೊಂಡಿದ್ದಾನೆ. ಈ ವೇಳೆ ಇತರ ಬಾಲಕರಿಗೂ ಇದೇ ರೀತಿಯ ಕಿರುಕುಳ ನೀಡಲಾಗಿತ್ತು ಎಂಬ ವಿಚಾರ ಬೆಳಕಿಗೆ ಬಂದಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಬಳಿಕ ಬಾಲಕ ತನ್ನ ಪೋಷಕರಿಗೆ ನಡೆದ ಘಟನೆಯನ್ನು ವಿವರಿಸಿದ್ದಾನೆ. ಮಗನಿಂದ ವಿಚಾರ ತಿಳಿದ ಪೋಷಕರು ಆತಂಕಗೊಂಡು ಮಂಗಳೂರಿನ ಬಿಷಪ್ ಅವರ ಗಮನಕ್ಕೆ ತಂದಿದ್ದಾರೆ. ಬಿಷಪ್ ಅವರ ಸೂಚನೆಯಂತೆ ಪೊಲೀಸರಿಗೆ ದೂರು ನೀಡಲಾಗಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿತ್ತು.

You may also like

Leave a Reply