ಮಂಗಳೂರು: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ (SIT) ಮುಖ್ಯಸ್ಥರ ಬದಲಾವಣೆ ಮಾಡಲಾಗಿದೆ.

ಎಸ್‌ಐಟಿ ಮುಖ್ಯಸ್ಥರಾಗಿದ್ದ ಐಜಿಪಿ ಎನ್. ಶಶಿಕುಮಾರ್ ಅವರನ್ನು ಜವಾಬ್ದಾರಿಯಿಂದ ಬಿಡುಗಡೆಗೊಳಿಸಲಾಗಿದ್ದು, ನೂತನ ಎಸ್‌ಐಟಿ ಮುಖ್ಯಸ್ಥರಾಗಿ ಚೇತನ್ ಸಿಂಗ್ ರಾಥೋಡ್ ಅವರನ್ನು ನೇಮಕ ಮಾಡಲಾಗಿದೆ.

ಇದೇ ವೇಳೆ ಎಸ್‌ಐಟಿ ತಂಡಕ್ಕೆ ಹೊಸದಾಗಿ ಎಸಿಪಿ ಶ್ರೀನಿಧಿ ಅವರನ್ನು ನೇಮಕ ಮಾಡಲಾಗಿದೆ. ಈ ಹಿಂದೆ ತಂಡದಲ್ಲಿದ್ದ ಎಎಸ್‌ಪಿ ವೆಂಕಟೇಶ್ ಪ್ರಸನ್ನ ಅವರ ಬದಲಿಗೆ ಶ್ರೀನಿಧಿ ಅವರನ್ನು ನಿಯೋಜಿಸಲಾಗಿದೆ. ಸೌಜನ್ಯ ಪ್ರಕರಣದ ಮರುತನಿಖೆ ನಡೆಯುತ್ತಿರುವ ಸಂದರ್ಭದಲ್ಲೇ ಎಸ್‌ಐಟಿ ತಂಡದಲ್ಲಿ ನಡೆದಿರುವ ಈ ಮಹತ್ವದ ಬದಲಾವಣೆ ಕುತೂಹಲಕ್ಕೆ ಕಾರಣವಾಗಿದೆ.
