Home ಕರಾವಳಿಮಂಗಳೂರು: ಹೃದಯಾಘಾತಕ್ಕೆ ಇಂಜಿನಿಯರಿಂಗ್ ವಿದ್ಯಾರ್ಥಿ ಬಲಿ

ಮಂಗಳೂರು: ಹೃದಯಾಘಾತಕ್ಕೆ ಇಂಜಿನಿಯರಿಂಗ್ ವಿದ್ಯಾರ್ಥಿ ಬಲಿ

by diksoochikannada.com

ಮಂಗಳೂರು: ಹೊರವಲಯದ ಸುರತ್ಕಲ್ ಕೃಷ್ಣಾಪುರ ನಿವಾಸಿಯಾಗಿದ್ದ ಇಂಜಿನಿಯರಿಂಗ್ ಡಿಪ್ಲೋಮಾ ವಿದ್ಯಾರ್ಥಿ ಅಫ್ತಾಬ್ (18) ಹೃದಯಾಘಾತದಿಂದ ಮೃತಪಟ್ಟ ದುರ್ಘಟನೆ ನಡೆದಿದೆ.

ಅಫ್ತಾಬ್ ಸುರತ್ಕಲ್ ಸೆಕ್ರೆಡ್ ಹಾರ್ಟ್ ಇನ್‌ಸ್ಟಿಟ್ಯೂಟ್‌ನಲ್ಲಿ ಇಲೆಕ್ಟ್ರಿಕಲ್ ಇಂಜಿನಿಯರಿಂಗ್ ಡಿಪ್ಲೋಮಾ ಅಧ್ಯಯನ ಮಾಡುತ್ತಿದ್ದ. ಮಂಗಳವಾರ ಬೆಳಿಗ್ಗೆ ಮನೆಯಲ್ಲಿ ಸ್ನಾನಕ್ಕೆಂದು ಹೋಗುತ್ತಿದ್ದ ವೇಳೆ ಏಕಾಏಕಿ ಹೃದಯಾಘಾತಕ್ಕೆ ಒಳಗಾಗಿ ಕುಸಿದುಬಿದ್ದ ಅಫ್ತಾಬ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಮೂಲಗಳು ತಿಳಿಸಿವೆ. ವಿದ್ಯಾರ್ಥಿಯ ಹಠಾತ್ ಮರಣದಿಂದ ಕುಟುಂಬ ಹಾಗೂ ಸ್ನೇಹಿತರು ಶೋಕಸಾಗರದಲ್ಲಿ ಮುಳುಗಿದ್ದಾರೆ.

You may also like

Leave a Comment