ದೆಹಲಿ: ದೆಹಲಿಯ ಐತಿಹಾಸಿಕ ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಗೇಟ್ ನಂ.1 ಬಳಿ ಭಾರೀ ಸ್ಫೋಟ ಸಂಭವಿಸಿದ್ದು, ಸ್ಥಳದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸ್ಫೋಟದ ತೀವ್ರತೆಯಿಂದ ಹಲವು ದೇಹಗಳು ಛಿದ್ರ ಛಿದ್ರವಾಗಿದ್ದು, ಬರೋಬ್ಬರಿ ಎಂಟು ಜನ ಸಾವನ್ನಪ್ಪಿ ಮರಣ ಸಂಖ್ಯೆ ಹೆಚ್ಚುವ ಸಾಧ್ಯತೆಗಳಿವೆ.

ಸ್ಫೋಟದ ಪರಿಣಾಮವಾಗಿ ಮೂರರಿಂದ ನಾಲ್ಕು ವಾಹನಗಳು ಬೆಂಕಿಗೆ ಆಹುತಿಯಾಗಿವೆ. 7 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ.

ಘಟನೆಯ ಸಮಯದಲ್ಲಿ ಕೆಂಪುಕೋಟೆ ಪ್ರದೇಶದಲ್ಲಿ ದೊಡ್ಡ ಜನಸಮೂಹವಿತ್ತು. ಇದೇ ವೇಳೆ ದೇಶಾದ್ಯಂತ 2,900 ಕೆಜಿ ಸ್ಫೋಟಕ ಪತ್ತೆಯಾದ ಹಿನ್ನೆಲೆ ಈ ಘಟನೆ ಆತಂಕ ಸೃಷ್ಟಿಸಿದೆ. ಸ್ಫೋಟದ ನಿಖರ ಕಾರಣ ಇನ್ನೂ ಪತ್ತೆಯಾಗಿಲ್ಲ. ಪೊಲೀಸರು ಮತ್ತು ಭದ್ರತಾ ಪಡೆಗಳು ಸ್ಥಳವನ್ನು ಸುತ್ತುವರೆದಿದ್ದು, ತನಿಖೆ ಪ್ರಾರಂಭವಾಗಿದೆ. ಪೊಲೀಸರು ನಾಗರಿಕರಿಗೆ ಎಚ್ಚರಿಕೆ ನೀಡಿದ್ದು, ಸ್ಥಳಕ್ಕೆ ಭೇಟಿ ನೀಡದಂತೆ ವಿನಂತಿಸಿದ್ದಾರೆ.
