ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರು ತನಿಖೆಗಾಗಿ ರಚಿಸಲಾಗಿರುವ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ತನಿಖಾ ಸಹಾಯಕರಾಗಿ 16 ಮಂದಿ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ನೇಮಕ ಮಾಡಿ ಡಿಜಿ ಮತ್ತು ಐಜಿಪಿ ಡಾ. ಎಂ.ಎ. ಸಲೀಂ ಆದೇಶ ಹೊರಡಿಸಿದ್ದಾರೆ.

ಸುಪ್ರೀಂಕೋರ್ಟ್ ಮರು ತನಿಖೆಗೆ ಆದೇಶಿಸಿದ ಬಳಿಕ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡವನ್ನು ರಚಿಸಿತ್ತು. ತನಿಖಾ ದಳದ ಮುಖ್ಯಸ್ಥರಾಗಿ ಎನ್. ಶಶಿಕುಮಾರ್, ಐಪಿಎಸ್ ಅವರನ್ನು ನೇಮಕ ಮಾಡಲಾಗಿತ್ತು. ಎಸ್‌ಐಟಿಯಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತ ಸಿ.ಎಚ್. ಸುಧೀರ್ ಕುಮಾರ್ ರೆಡ್ಡಿ, ಬೆಂಗಳೂರು ರಾಜ್ಯ ಗುಪ್ತ ವಾರ್ತೆ ವಿಭಾಗದ ಶ್ರೀಮತಿ ನಿಶಾ ಜೇಮ್ಸ್, ಬೆಂಗಳೂರು ಸಿಐಡಿ ಪೊಲೀಸ್ ಅಧೀಕ್ಷಕ ಲೋಕೇಶ್ ಜಗಲಸಾರ್ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ ವೆಂಕಟೇಶ್ ಪ್ರಸನ್ನ ಅವರನ್ನು ನೇಮಕ ಮಾಡಲಾಗಿತ್ತು.
ಇದೀಗ ತನಿಖೆಗೆ ಅಗತ್ಯವಿರುವ ಹೆಚ್ಚುವರಿ ಮಾನವ ಸಂಪನ್ಮೂಲ ಒದಗಿಸುವ ಉದ್ದೇಶದಿಂದ 16 ಮಂದಿಯನ್ನು ಎಸ್‌ಐಟಿ ತನಿಖಾ ಸಹಾಯಕರಾಗಿ ನಿಯೋಜಿಸಲಾಗಿದೆ.
ನೇಮಕಗೊಂಡ ಅಧಿಕಾರಿಗಳು ಹಾಗೂ ಸಿಬ್ಬಂದಿ
ಮಂಗಳೂರು ನಗರ ಸಿಸಿಬಿಯ ಎಸಿಪಿ ಮನೋಜ್ ಕುಮಾರ್ ನಾಯಕ್,
ಬೆಂಗಳೂರು ಸಿಸಿಬಿಯ ಎಸಿಪಿ ರಾಮಚಂದ್ರ ಬಿ, ಸಿಐಡಿ ಇನ್ಸ್‌ಪೆಕ್ಟರ್ ದೀಪಕ್, ಸಿಐಡಿ ಇನ್ಸ್‌ಪೆಕ್ಟರ್ ಮೋಹನ್ ಡಿ. ಪಾಟೀಲ್,
ಮಡಿವಾಳ ಸಂಚಾರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಈಶ್ವರಿ, ಕೋಣಾಜೆ ಪೊಲೀಸ್ ಠಾಣೆಯ ಪಿಎಸ್‌ಐ ಪುನೀತ್ ಗಾವಂಕರ್,
ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯ ಪಿಎಸ್‌ಐ ಪ್ರದೀಪ್, ಕಂಕನಾಡಿ ಪೊಲೀಸ್ ಠಾಣೆಯ ಮಹಿಳಾ ಪಿಎಸ್‌ಐ ಅನಿತಾ ನಿಕಂ, ಮಂಗಳೂರು ಸಿಸಿಬಿಯ ಎಎಸ್‌ಐ ಮೋಹನ್, ಕಂಕನಾಡಿ ಪೊಲೀಸ್ ಠಾಣೆಯ ಸಿಬ್ಬಂದಿ ಪ್ರದೀಪ್ ಕುಮಾರ್ ರೈ
ಗೋವರ್ಧನ್, ದಿನೇಶ್ ಎನ್.
ಉಳ್ಳಾಲ ಪೊಲೀಸ್ ಠಾಣೆಯ ಸಿಬ್ಬಂದಿ ರಾಧಾಕೃಷ್ಣ ಕೆ.ಕೆ., ಕಾವೂರು ಪೊಲೀಸ್ ಠಾಣೆಯ ಸಿಬ್ಬಂದಿ ರೆಜಿ ವಿ.ಎಂ., ಸುರತ್ಕಲ್ ಪೊಲೀಸ್ ಠಾಣೆಯ ಸಿಬ್ಬಂದಿ ರಾಜೇಂದ್ರ ಪ್ರಸಾದ್ ವಿ.ಪಿ., ಕಂಕನಾಡಿ ಪೊಲೀಸ್ ಠಾಣೆಯ ಮಹಿಳಾ ಸಿಬ್ಬಂದಿ ಪ್ರಮೀಳಾ
ಎಸ್‌ಐಟಿ ತನಿಖೆಗೆ ವಿವಿಧ ಹಂತಗಳಲ್ಲಿ ಅಗತ್ಯವಿರುವ ತನಿಖಾ ಸಹಕಾರ, ದಾಖಲೆಗಳ ಪರಿಶೀಲನೆ, ಸಾಕ್ಷಿಗಳ ವಿಚಾರಣೆ ಸೇರಿದಂತೆ ತನಿಖಾ ಪ್ರಕ್ರಿಯೆಗೆ ನೆರವಾಗುವ ಜವಾಬ್ದಾರಿಯನ್ನು ನಿಯೋಜಿತ ಅಧಿಕಾರಿಗಳು ಮತ್ತು ಸಿಬ್ಬಂದಿ ನಿರ್ವಹಿಸಲಿದ್ದಾರೆ.
ಡಿಜಿ ಮತ್ತು ಐಜಿಪಿ ಡಾ. ಎಂ.ಎ. ಸಲೀಂ ಅವರ ಆದೇಶದಂತೆ ಈ ನಿಯೋಜನೆ ಜಾರಿಗೆ ಬಂದಿದೆ.
