ಮಂಗಳೂರು: ಮಂಗಳೂರಿನ ಎಂಆರ್ಪಿಎಲ್ನ ಮೂರನೇ ಘಟಕದಲ್ಲಿ ಸಂಭವಿಸಿದ್ದ ಭಾರೀ ಸ್ಫೋಟ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮತ್ತೋರ್ವ ಕಾರ್ಮಿಕ ಮೃತಪಟ್ಟಿದ್ದಾರೆ. ಸುರತ್ಕಲ್ನ ಇಡ್ಯಾ ಗ್ರಾಮದ ನಿವಾಸಿ, ಗುತ್ತಿಗೆ ಕಾರ್ಮಿಕ ರಾಜೇಶ್ ಡಿ’ಸಿಲ್ವಾ (Rajesh D’Silva) ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ.

ಸೆಪ್ಟೆಂಬರ್ 30ರಂದು ಎಂಆರ್ಪಿಎಲ್ನ ಮೂರನೇ ಘಟಕದಲ್ಲಿ ಭಾರೀ ಸ್ಫೋಟ ಸಂಭವಿಸಿತ್ತು. ಈ ದುರಂತದಲ್ಲಿ ಮನೀಶ್ ಎಂಬ ಸಿಬ್ಬಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಒಂಬತ್ತು ಮಂದಿ ಗಾಯಗೊಂಡಿದ್ದರು.
ಸ್ಫೋಟದಲ್ಲಿ ರಾಜೇಶ್ ಡಿ’ಸಿಲ್ವಾ ಅವರು ತೀವ್ರ ಸುಟ್ಟ ಗಾಯಗಳಿಗೆ ಒಳಗಾಗಿದ್ದರು. ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಕಳೆದ 18 ದಿನಗಳಿಂದ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ರಾಜೇಶ್ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
