Home ಕರ್ನಾಟಕಬೆಂಗಳೂರಿನಲ್ಲಿ ಒಂದೇ ಕುಟುಂಬದ ಏಳು ಮಂದಿಯ ಭೀಕರ ಹತ್ಯೆ!

ಬೆಂಗಳೂರಿನಲ್ಲಿ ಒಂದೇ ಕುಟುಂಬದ ಏಳು ಮಂದಿಯ ಭೀಕರ ಹತ್ಯೆ!

by diksoochikannada.com

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಒಂದೇ ಕುಟುಂಬದ ಏಳು ಮಂದಿಯನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಆತಂಕ ಮೂಡಿಸಿದೆ. ಕ್ಯಾಬ್ ಚಾಲಕ ಇಂದುಶೇಖರ್ ಎಂಬಾತ ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಆಘಾತಕಾರಿ ವಿಚಾರಗಳು ಬೆಳಕಿಗೆ ಬಂದಿವೆ.

ರೂಪಾವತಿ, ಸುನೀತಾ, ಶಿವಕುಮಾರ್, ಶಂಕರ್, ದಿವ್ಯಾ, ನಳಿನಿ ಹಾಗೂ ಏಳು ವರ್ಷದ ಬಾಲಕ ಪುನೀತ್ ಹತ್ಯೆಗೀಡಾದವರು ಎಂದು ವರದಿಯಾಗಿದೆ. ಕೌಟುಂಬಿಕ ಕಲಹವೇ ಈ ಸಾಮೂಹಿಕ ಹತ್ಯೆಗೆ ಕಾರಣ ಎನ್ನಲಾಗಿದ್ದು, ಆರೋಪಿಯು ರುಬ್ಬುಗುಂಡಿನಿಂದ ಹಲ್ಲೆ ನಡೆಸಿ ಏಳು ಮಂದಿಯನ್ನು ಹತ್ಯೆ ಮಾಡಿದ್ದಾನೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.
ಹತ್ಯೆಯ ಬಳಿಕ ಮೃತದೇಹಗಳನ್ನು ವಿವಿಧೆಡೆ ಎಸೆದಿರುವುದಾಗಿ ಆರೋಪಿಯ ವಿಚಾರಣೆಯಲ್ಲಿ ತಿಳಿದುಬಂದಿದೆ ಎನ್ನಲಾಗಿದೆ. ನಂದಿಬೆಟ್ಟದ ತಪ್ಪಲಿನಲ್ಲಿ ಏಳು ವರ್ಷದ ಬಾಲಕ ಪುನೀತ್‌ನ ಮೃತದೇಹ ಪತ್ತೆಯಾಗಿದೆ ಎಂದು ವರದಿಯಾಗಿದೆ.
ಒಂದೇ ಕುಟುಂಬದ ಏಳು ಮಂದಿಯ ಹತ್ಯೆ ಪ್ರಕರಣ ಬೆಂಗಳೂರಿನಲ್ಲಿ ತೀವ್ರ ಆತಂಕ ಸೃಷ್ಟಿಸಿದ್ದು, ಘಟನೆಯ ಹಿಂದಿನ ನಿಖರ ಕಾರಣ ಹಾಗೂ ಆರೋಪಿಯ ಪಾತ್ರದ ಕುರಿತು ಪೊಲೀಸರ ತನಿಖೆಯಿಂದ ಹೆಚ್ಚಿನ ಮಾಹಿತಿ ಹೊರಬರಬೇಕಿದೆ.

You may also like

Leave a Reply